ಬೆಳಗಾವಿ: ಬೆಂಗಳೂರಿನಲ್ಲಿ ಬಸ್ ಗೆ ಕಾಯುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಪತ್ತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಘಟನೆ ನಡೆದಿದೆ. ಆರೋಪಿಗಳನ್ನು ಪೊಲೀಸರು ಶೀಘ್ರ ಪತ್ತೆ ಮಾಡಲಿದ್ದಾರೆ. ಕೃತ್ಯವೆಸಗಿದ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರವೆಸಗಿ ಮೊಬೈಲ್, ನಗದು ಹಣ ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರುಯಾಗಿದ್ದಾರೆ. ಜನವರಿ 19ರಂದು ರಾತ್ರಿ 11:30ರ ಸುಮಾರಿಗೆ ಕೆ.ಆರ್ ಮಾರುಕಟ್ಟೆಯ ಗೋಡೌನ್ ಸ್ಟ್ರೀಟ್ ನಲ್ಲಿ ಘಟನೆ ನಡೆದಿದೆ. ಪ್ರಕರಣ ಸಂಬಂಧ 37 ವರ್ಷದ ಮಹಿಳೆ ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.