ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಾಂಧೀಜಿ ಪುತ್ಥಳಿ ಅನಾವರಣಗೊಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಚರಕ ತಿರುಗಿಸುವ ಮೂಲಕ ಗಾಂಧೀಜಿ ಪುತ್ಥಳಿ ಅನಾವರಣಗೊಳಿಸಿದರು. ೀ ವೇಳೆ ಸಂಸದೆ ಪ್ರಿಯಾಂಕ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ, ಗೃಹ ಸಚಿವ ಪರಮೇಶ್ವರ್ ಮತ್ತಿತರರಿದ್ದರು.
ಬೆಳಗಾವಿಗೆ ಸಂಸದೆ ಪ್ರಿಯಾಂಕ ಗಾಂಧಿ ಆಗಮಿಸಿದ್ದು,DCM ಡಿ.ಕೆ ಶಿವಕುಮಾರ್ ಅವರು ಹೂಗುಚ್ಚ ನೀಡಿ ಸ್ವಾಗತ ಕೋರಿದ್ದಾರೆ.ಬೆಳಗಾವಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಲೋಕಸಭೆ ಸದಸ್ಯರಾದ ಪ್ರಿಯಾಂಕ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಿ ಬರಮಾಡಿಕೊಂಡರು.ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ, ಗಾಂಧಿ ಭಾರತ ಸಮಾವೇಶ ಕಾರ್ಯಕ್ರಮ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹಾಜರಿದ್ದಾರೆ.
LIVE : ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ, ಸುವರ್ಣ ಸೌಧ, ಬೆಳಗಾವಿ. #ಗಾಂಧಿಭಾರತ https://t.co/pf1sCyzvB3
— Karnataka Congress (@INCKarnataka) January 21, 2025