ಉತ್ತರ ಪ್ರದೇಶದ ಬುಲಂದ್‌ಶಹರ್‌ನ ದಿಬೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಹಾದೇವ ಚೌರಾಹೆಯ ಬಳಿ ಟ್ರಕ್ ಮತ್ತು ಸ್ಲೀಪರ್ ಕೋಚ್ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 17 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಸಿಸಿಟಿವಿ ಕ್ಯಾಮೆರಾದಲ್ಲಿ ಈ ಅಪಘಾತದ ದೃಶ್ಯ ಸೆರೆಯಾಗಿದೆ. ಕಾರಿನೊಂದಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಟ್ರಕ್ ಚಾಲಕ ವಾಹನವನ್ನು ತಿರುಗಿಸಿದಾಗ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.
#बुलंदशहर: ट्रक और स्लीपर कोच बस की भिड़ंत, सीसीटीवी में कैद हुए हादसा। कार को बचाने चक्कर में बस में घुसा ट्रक। 17 यात्री घायल। एनएच 509 पर थाना डिबाई की महादेव चौराहे पर देर रात हुआ दर्दनाक हादसा। pic.twitter.com/unLgzOYMo8
— Shah Nawaz journalist (News 24) (@Shahnawazreport) January 20, 2025