ಚಾಮರಾಜನಗರ: ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಹನೂರು ತಾಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆ ದಾಳಿ ನಡೆಸಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಮುನಿಯಪ್ಪ (40) ಮೃತ ದುರ್ದೈವಿ.
ಅರಣ್ಯ ಪ್ರದೇಶದಲ್ಲಿ ಕಾಡಾನೆ ಇಬ್ಬರ ಮೇಲೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಮುನಿಯಪ್ಪ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಆತನ ಸ್ನೇಹಿತ ಕುಳ್ಳೆಚ್ಚ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಗಮನಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.