ಮಂಗಳೂರು: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಮಂಗಳೂರಿನ ಉಳ್ಳಾಲ ಬಳಿಯ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಸ್ಥಳಮಹಜರು ನಡೆಸಲು ಕರೆದುಕೊಂಡುಬಂದಿದ್ದ ವೇಳೆ ಆರೋಪಿಯೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.
ತಕ್ಷಣ ಪೊಲೀಸರು ಆರೋಪಿ ಮುಂಬೈ ಕಣ್ಣನ್ ಮಣಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.