ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಶಾಕ್ ನೀಡಿದೆ. ತೆರಿಗೆ ಬಾಕಿದಾರರ ಆಸ್ತಿ ಹರಾಜಿಗೆ ಬಿಬಿಎಂಪಿ ಮುಂದಾಗಿದೆ.
ಸ್ಥಿರಾಸ್ತಿಗಳನ್ನು ಮಾರಾಟ ಮಾಡಿ ತೆರಿಗೆ ಬಾಕಿ ಜಮಾ ಮಾಡಿಕೊಳ್ಳಲು ಪ್ಲಾನ್ ಮಾಡಲಾಗಿದೆ. ಹರಾಜಿನಲ್ಲಿ ಬಂದ ಹಣದಿಂದ ತೆರಿಗೆ ವಸೂಲಿಗೆ ತಯಾರಿ ನಡೆಸಲಾಗಿದೆ. ಮುಂದಿನ ವಾರದಿಂದ ಒಂದೊಂದು ವಲಯದಲ್ಲಿ ಹರಾಜು ಪ್ರಕ್ರಿಯೆ ಕೈಗೊಳ್ಳಲಾಗುವುದು.
ತೆರಿಗೆ ಪಾವತಿಸದ ಎರಡು ಲಕ್ಷ ಆಸ್ತಿಗಳನ್ನು ಬಿಬಿಎಂಪಿ ಗುರುತಿಸಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರು ಕೂಡಲೇ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಈ ಕುರಿತು ಬಿಬಿಎಂಪಿ ಕಂದಾಯ ವಿಭಾಗದಿಂದ ಆದೇಶ ಹೊರಡಿಸಲಾಗಿದೆ.
ಹಲವು ಎಚ್ಚರಿಕೆ ನಡುವೆಯೂ ಭಾರಿ ಪ್ರಮಾಣದಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ವಸತಿಯೇತರ ಕಟ್ಟಡಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಬಿಬಿಎಂಪಿ ಸುಮಾರು 830 ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿದೆ ಎನ್ನಲಾಗಿದೆ.