ನವದೆಹಲಿ: ನಟ ದರ್ಶನ್ ಮತ್ತು ಸಹಚರರಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜನವರಿ 24ರಂದು ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ.
ನ್ಯಾಯಮೂರ್ತಿ ಪರ್ದಿವಾಲಾ ಹಾಗೂ ನ್ಯಾಯಮೂರ್ತಿ ಮಹಾದೇವನ್ ಅವರ ಸುಪ್ರೀಂಕೋರ್ಟ್ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಾಗುವುದು. ಈಗಾಗಲೇ ದೆಹಲಿಗೆ ಎಸ್.ಪಿ.ಪಿ. ಪ್ರಸನ್ನಕುಮಾರ್ ತೆರಳಿ ಪೊಲೀಸರ ಪರ ನೇಮಕವಾಗಿರುವ ವಕೀಲರ ಜೊತೆಗೆ ಚರ್ಚೆ ನಡೆಸಲಿದ್ದಾರೆ.
ವಕೀಲ ಅನಿಲ್ ಸಿ ನಿಶಾನಿ ಅವರೊಂದಿಗೆ ಚರ್ಚೆ ನಡೆಸಲಿದ್ದು, ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.