
ಬೆಂಗಳೂರು: ಶಾಲೆಗಳಲ್ಲಿ ರಾಷ್ಟ್ರೀಯ, ನಾಡ ಹಬ್ಬದ ದಿನ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ವತಿಯಿಂದ ಸೂಚನೆ ನೀಡಲಾಗಿದೆ.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಜನವರಿ 26 ಗಣರಾಜ್ಯೋತ್ಸವ ಸೇರಿದಂತೆ ಎಲ್ಲ ರಾಷ್ಟ್ರೀಯ ಹಬ್ಬಗಳು ಮತ್ತು ನಾಡಹಬ್ಬಗಳ ದಿನಗಳಲ್ಲಿ ಮಕ್ಕಳಿಗೆ ಬಿಸಿಯೂಟ ನೀಡುವಂತೆ ಶಿಕ್ಷಣ ಇಲಾಖೆ ತಿಳಿಸಿದೆ.
ಪಿಎಂ ಪೋಷನ್- ಮಧ್ಯಾಹ್ನದ ಬಿಸಿಯೂಟ ಯೋಜನೆ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ರಾಷ್ಟ್ರೀಯ ಹಬ್ಬಗಳು ಮತ್ತು ನಾಡಹಬ್ಬ ಕನ್ನಡ ರಾಜ್ಯೋತ್ಸವ ದಿನಗಳನ್ನು ಶಾಲಾ ಕೆಲಸದ ದಿನಗಳೆಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ರಾಷ್ಟ್ರೀಯ ಹಬ್ಬಗಳು ಮತ್ತು ನಾಡಹಬ್ಬದ ದಿನಗಳಲ್ಲಿ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ತಪ್ಪದೇ ಬಿಸಿಯೂಟ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.