ರಾಯಚೂರು : ಟೈರ್ ಸ್ಪೋಟಗೊಂಡು ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಹೊರಭಾಗದಲ್ಲಿ ನಡೆದಿದೆ.
ಕ್ರೂಸರ್ ವಾಹನ ಚಾಲಕ , ನಾಲ್ವರು ವಿದ್ಯಾರ್ಥಿಗಳು ಸೇರಿ ಐವರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಐವರು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರು ಆಂಧ್ರ ಮೂಲದವರು ಎಂದು ಹೇಳಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.