ನವದೆಹಲಿ: 2025-26ರ ಮಾರುಕಟ್ಟೆ ಋತುವಿನಲ್ಲಿ ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.
ಇಂದು ನವದೆಹಲಿಯಲ್ಲಿ ಸಂಪುಟ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ಕಚ್ಚಾ ಸೆಣಬಿಗೆ ಕ್ವಿಂಟಲ್‌ಗೆ 5650 ರೂಪಾಯಿಗಳ ಕನಿಷ್ಠ ಬೆಂಬಲ ಬೆಲೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ
ಇದು ಹಿಂದಿನ 2024-25ರ ಮಾರುಕಟ್ಟೆ ಋತುವಿಗಿಂತ 315 ರೂಪಾಯಿ ಹೆಚ್ಚಾಗಿದೆ. ಇದು ಸೆಣಬಿನ ಉದ್ಯಮವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಅವಲಂಬಿಸಿರುವಂತಹ 40 ಲಕ್ಷ ರೈತ ಕುಟುಂಬಗಳಿಗೆ ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಸಾಧಿಸಿದ ಪ್ರಗತಿಯನ್ನು ಕೇಂದ್ರ ಸಚಿವ ಸಂಪುಟ ಪರಿಶೀಲಿಸಿದೆ. ಈ ಹಿಂದೆ ನಿರ್ಧರಿಸಿದಂತೆ ಇನ್ನೂ ಎರಡು ವರ್ಷಗಳ ಕಾಲ ಅದರ ಅನುಷ್ಠಾನವನ್ನು ಮುಂದುವರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. 2021 ರಲ್ಲಿ, ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ ಅನುಷ್ಠಾನವನ್ನು ಐದು ವರ್ಷಗಳ ಕಾಲ 2026 ರವರೆಗೆ ವಿಸ್ತರಿಸಿತ್ತು.