ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾಣಸಭೆ ಅಧ್ಯಕ್ಷ ಯು.ಟಿ. ಖಾದರ್ ಭಾಗವಹಿಸಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ ಅಧ್ಯಕ್ಷ ಸತೀಶ್ ಮಹಾನ ಅವರ ಆಹ್ವಾನದ ಮೇರೆಗೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಅದ್ದೂರಿಯಾಗಿ ಆಯೋಜನೆಗೊಂಡಿರುವ ಮಹಾಕುಂಭಮೇಳ ಕಾರ್ಯಕ್ರಮದಲ್ಲಿ ಖಾದರ್ ಭಾಗವಹಿಸಿದ್ದು, ಸಹಾಯಕ ಆಯುಕ್ತ ದಶರಥ ಕುಮಾರ್ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಬಿಹಾರದ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಖಾದರ್ ಅವರು ಉತ್ತರ ಪ್ರದೇಶ ಸ್ಪೀಕರ್ ಆಹ್ವಾನದ ಮೇರೆಗೆ ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ.