ಬೆಂಗಳೂರು: ಬೆಳಗಾವಿ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ ಅವರ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ನಿನ್ನೆ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ್ದ ಬಸಪ್ಪ ದಿಢೀರ್ ಕುಸಿದು ಬಿದ್ದು ಅಸ್ವಸ್ಥರಾಗಿದ್ದು, ಜನ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಸಪ್ಪ ಪಾಮೇನಹಳ್ಳಿ ಮೃತಪಟ್ಟಿದ್ದರು. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನದಿಹರಳಹಳ್ಳಿ ನಿವಾಸಿಯಾಗಿರುವ ಬಸಪ್ಪ ಅವರ ಕುಟುಂಬದವರಿಗೆ ಪರಿಹಾರ ಘೋಷಿಸಲಾಗಿದೆ.