ಧಾರವಾಡ: ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ 05 ತುರ್ತು ಚಿಕಿತ್ಸ ವೈದ್ಯಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳನ್ನು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಫೆಬ್ರುವರಿ 1, 2025 ರಿಂದ ಹುದ್ದೆಗಳ ನೇಮಕಾತಿ ಪೂರ್ಣಗೊಳ್ಳುವವರೆಗೆ ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ ಆಸ್ಪತ್ರೆ ಧಾರವಾಡ ಕಚೇರಿಯಲ್ಲಿ ನೇರ ಸಂದರ್ಶನ ನಡೆಸಲಾಗುವುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ ಆಸ್ಪತ್ರೆ, ಧಾರವಾಡ – 580008 ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.