alex Certify BIG NEWS : ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ʼಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರ ಸಿದ್ದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ʼಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರ ಸಿದ್ದ

ಬೆಂಗಳೂರು : ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ʼಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರ ಸಿದ್ಧಗೊಂಡಿದೆ.

ಕರ್ನಾಟಕದ ಹಿರಿಮೆ, ಸರ್ವಧರ್ಮ ಸಮನ್ವಯ, ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸುವ ಈ ಸ್ತಬ್ಧಚಿತ್ರವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಶ್ರೀ ಹೇಮಂತ್ ಎಂ. ನಿಂಬಾಳ್ಕರ್ ಅವರು ಇಂದು ವೀಕ್ಷಿಸಿದರು.

ಕರ್ನಾಟಕಕ್ಕೆ ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಅತ್ಯಂತ ಸ್ಮರಣೀಯವಾದುದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ನಮ್ಮ ರಾಜ್ಯದಲ್ಲಿ ಎಲ್ಲಾ ಧರ್ಮಗಳ ದೇವಾಲಯಗಳಿವೆ.

ಈ ಪೈಕಿ ಐತಿಹಾಸಿಕ ಪಟ್ಟಣವಾದ ಗದಗದ ಲಕ್ಕುಂಡಿಯು ಒಂದಾಗಿದೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿವೆ. ಜೊತೆಗೆ, ದೇವಾಲಯವೇ ಮರುಜೀವ ತಳೆದಂತಿದೆ. ರಾಜ್ಯವು ಪ್ರಸ್ತುತಪಡಿಸುತ್ತಿರುವ ಈ ಸ್ತಬ್ಧಚಿತ್ರವು ಇದೇ ಜನವರಿ 26 ರಂದು ಎಲ್ಲರ ಮನಸೂರೆಗೊಳ್ಳಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...