‘ಮಡಿಕೇರಿ : ಪ್ರಸಕ್ತ (2024-25) ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ. ದೇವರಾಜು ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ, 05 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ.
ಅರ್ಜಿಯನ್ನು ವೆಬ್ಸೈಟ್ ವಿಳಾಸ https://bcwd.karnataka.gov.in/ ನಲ್ಲಿ ಸಲ್ಲಿಸಬೇಕು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ -1 ಪ್ರವರ್ಗ-2ಎ, 3ಎ.3ಬಿ ರೂ.8 ಲಕ್ಷ ಆಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಷರತ್ತು ನಿಬಂಧನೆಗಾಗಿ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಿ ಕಚೇರಿ ವೇಳೆಯಲ್ಲಿ ಮಾಹಿತಿ ಪಡೆಯಬಹುದಾಗಿದೆ.