ಬೆಂಗಳೂರು : 2019 ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರಕಟವಾಗಿದ್ದು, ನಟ ಸುದೀಪ್ ಗೆ ಅತ್ಯುತ್ತಮ ನಟ ಎಂಬ ಗೌರವ ಪಡೆದಿದ್ದಾರೆ.
ಸರ್ಕಾರದ ಆದೇಶದಲ್ಲಿ ಶ್ರೀ ನಂಜುಂಡೇಗೌಡ, ನಿರ್ದೇಶಕರು, ನಿರ್ಮಾಪಕರು ಇವರ ಅಧ್ಯಕ್ಷತೆಯಲ್ಲಿ 2019ನೇ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳಿಗಾಗಿ ಚಲನಚಿತ್ರಗಳನ್ನು ಆಯ್ಕೆ ಮಾಡಲು ಆಯ್ಕೆ ಸಲಹಾ ಸಮಿತಿಯನ್ನು ರಚಿಸಲಾಗಿತ್ತು.
2019ನೇ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿಯು 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಿದ್ದ ಒಟ್ಟು 180 ಚಲನಚಿತ್ರಗಳ ಪೈಕಿ, ನಿಯಮಾನುಸಾರ ಇಲ್ಲದಿರುವ 8 ಚಲನಚಿತ್ರಗಳನ್ನು ಹೊರತುಪಡಿಸಿ, 172 ಚಲನಚಿತ್ರಗಳನ್ನು ಮಾತ್ರ ವೀಕ್ಷಿಸಿ, ಆಯ್ಕೆ ಮಾಡಿ ಸಲ್ಲಿಸಿರುವ ವರದಿಯನ್ನು ಅಂಗೀಕರಿಸಿ ಸರ್ಕಾರದ ಆದೇಶವನ್ನು ಹೊರಡಿಸುವಂತೆ ಮೇಲೆ ಕ್ರಮ ಸಂಖ್ಯೆ (2)ರ ಓದಲಾದ ಪತ್ರದಲ್ಲಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಇವರು ಕೋರಿರುತ್ತಾರೆ.ಪ್ರಸ್ತಾವನೆಯನ್ನು ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ ವರದಿಯನ್ನು ಅಂಗೀಕರಿಸಿ, ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದಲ್ಲಿನಂತೆ 2019ನೇ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲು ಸರ್ಕಾರವು ಹರ್ಷಿಸುತ್ತದೆ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.