ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವರಲ್ಲಿ ಶಂಕಿತ ಮಂಕಿಪಾಕ್ಸ್ ಸೋಂಕು ಪತ್ತೆಯಾಗಿದೆ. 40 ವರ್ಷದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಲಕ್ಷಗಳು ಕಂಡುಬಂದಿವೆ.
ಒಂದು ವೇಳೆಸೋಂಕು ದೃಢವಾದರೆ ಈವರ್ಷ ಬೆಂಗಳೂರಿನಲ್ಲಿ ಪತ್ತೆಯಾದ ಮೊದಲ ಪ್ರಕರಣವಾಗಲಿದೆ. ದುಬೈನಿಂದ ಬಂದಿರುವ 40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ನಂತಹ ಲಕ್ಷಣ ಕಂಡುಬಂದಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಂಕಿನ ಬಗ್ಗೆ ಹೆಚ್ಚಿನ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ವರದಿ ಬಂದ ಬಳಿಕವಷ್ಟೇ ದೃಢವಾಗಬೇಕಿದೆ.
ಕಳೆದವರ್ಷ ಆಫ್ರಿಕನ್ ದೇಶಗಳಲ್ಲಿ ಮಂಕಿಪಾಕ್ಸ್ ಪತ್ತೆಯಾಗಿತ್ತು. ಬಳಿಕ ಹಲವು ದೇಶಗಳಲ್ಲಿಯೂ ಈ ಸೋಂಕು ಹರಡಿತ್ತು. ಜಾಗತಿಕ ಮಟ್ತದಲ್ಲಿಯೂ ಆತಂಕಸೃಷ್ಟಿಯಾಗಿತ್ತು . 2024ರ ಆಗಸ್ಟ್ ನಲ್ಲಿ ಅಂತರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಲಾಗಿತ್ತು.