ಹಾಸನ: ನಾಪತ್ತೆಯಾಗಿದ್ದ ಮೂವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಮೈಸೂರಿನಲ್ಲಿ ಪತ್ತೆಯಾಗಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರದ ಆದರವಳ್ಳಿ ಸರ್ಕಾರಿ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಬುಧವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದರು. ಸಕಲೇಶಪುರದ ಕುನಿಗನಹಳ್ಳಿ ಗ್ರಾಮದ ಮೂವರು ವಿದ್ಯಾರ್ಥಿಗಳು ಶಾಲೆಗೆ ಹೋಗುವುದಾಗಿ ಹೋಗಿದ್ದರು. ಆದರೆ ಶಾಲೆಗೆ ಹೋಗದೆ, ವಾಪಾಸ್ ಮನೆಗೂ ಹೋಗದೇ ನಾಪತ್ತೆಯಾಗಿದ್ದರು.
ಕಂಗಾಲಾದ ಪೋಷಕರು ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಮೂವರು ವಿದ್ಯಾರ್ಥಿಗಳು ಮೈಸೂರಿನಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
16 ವರ್ಷದ ಶರತ್, ಧನಂಜಯ್ ಹಾಗೂ ಮುರಳಿ ಮೈಸೂರಿನಲ್ಲಿ ಪತ್ತೆಯಾಗಿದ್ದಾರೆ. ನಾಪತ್ತೆಯಾಗಿದ್ದ ಶರತ್ ಬಳಿ ಮೊಬೈಲ್ ಇತ್ತು. ಹಾಗಾಗಿ ಲೊಕೇಶ್ ಆಧಾರದ ಮೇಲೆ ಪೊಲೀಸರು ವಿದ್ಯಾರ್ಥಿಗಳನ್ನು ಪತ್ತೆ ಮಾಡಿದ್ದಾರೆ.