ರಾಯಚೂರು: ಸರ್ಕಾರಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 18ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಬನ್ನಿಗೋಳ ಗ್ರಾಮದಲ್ಲಿ ನಡೆದಿದೆ.
ಶ್ರೀದೇವಿ (19) ಮೃತ ಯುವತಿ. ಕೂಲಿಕಾರ್ಮಿಕರು ಟ್ರ್ಯಾಕ್ಟರ್ ನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ಎದುರಿನಿಂದ ಬಂದ್ ಬಸ್ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದಿದೆ. ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದವರು ಹಾಗೂ ಟ್ರ್ಯಾಕ್ಟರ್ ನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಲಿಂಗಸಗೂರು ತಾಲೂಕು ಆಸ್ಪರೆಗೆ ದಾಖಲಿಸಲಾಗಿದೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.