ಮುಂಬೈ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಮುಂಬೈ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಮಹೇಶ್ ಚಂದ್ರ ಮಿಶ್ರಾ ಎಂಬುವವರು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ 2018ರಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ಮುಂಬೈಯ ಸ್ಥಳೀಯ ನ್ಯಾಯಾಲಯ ಮೂರು ಬಾರಿ ಕೋರ್ಟ್ ಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು. ಆದಾಗ್ಯೂ ರಾಮ್ ಗೋಪಾಲ್ ವರ್ಮಾ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಮ್ ಗೋಪಾಲ್ ವರ್ಮಾ ದೋಷಿ ಎಂದು ತೀರ್ಪು ನೀಡಿರುವ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊಡಿಸಿದೆ.
ಅಲ್ಲದೇ ಮೂರು ತಿಂಗಳ ಒಳಗಾಗಿ ರಾಮ್ ಗೋಪಾಲ್ ವರ್ಮಾ, ಮಹೇಶ್ ಚಂದ್ರ ಮಿಶ್ರಾ ಅವರಿಗೆ 3.72 ಲಕ್ಷ ರೂಪಾಯಿ ಪರಿಹಾರ ಕೊಡಬೇಕು. ಒಂದು ವೇಳೆ ಈ ಅವಧಿಯಲ್ಲಿ ಪರಿಹಾರ ನೀಡದಿದ್ದಲ್ಲಿ 3 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶ ಹೊರಡಿಸಿದೆ.