alex Certify ನೀರಾವರಿಗೆ ರಾಜ್ಯ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ: 1274 ಕೋಟಿ ವೆಚ್ಚದಲ್ಲಿ ಮತ್ತೊಂದು ಯೋಜನೆ ಸಿದ್ಧ: ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀರಾವರಿಗೆ ರಾಜ್ಯ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ: 1274 ಕೋಟಿ ವೆಚ್ಚದಲ್ಲಿ ಮತ್ತೊಂದು ಯೋಜನೆ ಸಿದ್ಧ: ಸಿಎಂ ಸಿದ್ದರಾಮಯ್ಯ

ಹಿರಿಯೂರು: ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ. 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಈ ಯೋಜನೆ ಜಾರಿಯಾದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿರಿಯೂರಿನಲ್ಲಿ ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಾಣಿ ವಿಲಾಸ ಜಲಾಶಯ ಕೋಡಿ ಬಿದ್ದಿದ್ದು ಸರ್ಕಾರದಿಂದ ಬಾಗಿನ ಅರ್ಪಿಸಿ, ಗಂಗಾಪೂಜೆ ನೆರವೇರಿಸಿದ್ದೇವೆ. 115 ವರ್ಷಗಳ ಇತಿಹಾಸ ಇರುವ, ರಾಜ್ಯದಲ್ಲಿ ನಿರ್ಮಾಣ ಆದ ಮೊದಲ ಜಲಾಶಯ ಇದಾಗಿದ್ದು ಮೂರನೇ ಬಾರಿ ಕೋಡಿ ಬಿದ್ದಿದೆ. ಅಂದಿನ‌ ಮಹಾರಾಣಿ ಅಮ್ಮಣ್ಣಿ ತಾಯಿ ತಮ್ಮ ಒಡವೆಗಳನ್ನು ಮಾರಿ 45 ಲಕ್ಷ ರೂಪಾಯಿ ಖರ್ಚು ಮಾಡಿ ಈ ಜಲಾಶಯ ನಿರ್ಮಿಸಿದ್ದಾರೆ. ಇದು 30 ಸಾವಿರ ಎಕರೆ ಕೃಷಿ ಭೂಮಿಗೆ ನೀರು ಒದಗಿಸುತ್ತಿದೆ. ಹೀಗಾಗಿ ರಾಣಿ ಅಮ್ಮಣ್ಣಿಯವರನ್ನು ನಾವು ಸ್ಮರಿಸುತ್ತೇವೆ, ಧನ್ಯವಾದ ಅರ್ಪಿಸುತ್ತೇವೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುವುದಾಗಿ ಕಾರಜೋಳ ಅವರು ಬರೀ ಬಾಯಿ ಮಾತಲ್ಲಿ ಹೇಳಿ ಬಳಿಕ ವಂಚಿಸಿದರು. ಈ ಯೋಜನೆಗೆ 5300 ಕೋಟಿ ರೂಪಾಯಿ ಕೊಡುವುದಾಗಿ ಕೇಂದ್ರ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಆದರೆ ನಯಾಪೈಸೆ ಬಿಡುಗಡೆಗೊಳಿಸದೆ ಈ ಭಾಗದ ಜನ ಸಮುದಾಯಕ್ಕೆ ಗೋಂವಿಂದ ಕಾರಜೋಳ ಮತ್ತು ಕೇಂದ್ರ ಸರ್ಕಾರ ವಂಚಿಸಿದೆ ಎಂದು ಕಿಡಿಕಾರಿದರು.

ಈಗಲಾದರೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆ ಚರ್ಚಿಸಿ ಕೊಟ್ಟ ಮಾತಿನಂತೆ 5300 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿಸಿ ಎಂದರು.

ಬಿಜೆಪಿ ಕೊಟ್ಟ ಮಾತಿಗೆ ತಪ್ಪಿದೆ. ನಾವು ಚುನಾವಣೆ ವೇಳೆ ಕೊಟ್ಟ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿ ರಾಜ್ಯದ ಬಡವರು, ಮಧ್ಯಮ ವರ್ಗದವರು ಸೇರಿ ಎಲ್ಲಾ ಜನ ಸಮುದಾಯಗಳ ನಂಬಿಕೆ ಉಳಿಸಿಕೊಂಡಿದ್ದೇವೆ. ಇದೇ ನಮಗೂ ಬಿಜೆಪಿಗೂ ಇರುವ ವ್ಯತ್ಯಾಸ ಎಂದರು.‌

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...