ಬೆಂಗಳೂರು : 2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 15-02-2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ. ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಕೆಳಕಂಡಂತಿದೆ.
ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ-2025” ವನ್ನು ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್ಸೈಟ್ http://kreis.kar.nic.in ನಲ್ಲಿ ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ 06-02-2025 ರಿಂದ ಈ ಮೇಲ್ಕಂಡ ವೆಬ್ಸೈಟ್ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಗಮನಿಸಿ: ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ, ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು.