ಧಾರವಾಡ : ಪ್ರವಾಸೋದ್ಯಮ ಇಲಾಖೆಯಿಂದ 2024-25 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಉದ್ಯಮಶೀಲತೆ ಕುರಿತು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಘಟಕ ವೆಚ್ಚದ ಶೇ.70 ರಷ್ಷು ಅಥವಾ ಗರಿಷ್ಟ ರೂ.5 ಲಕ್ಷಗಳ ಸಹಾಯಧನ ನೀಡಲಾಗುತ್ತದೆ.
ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜನವರಿ 31, 2025 ರೊಳಗಾಗಿ ಧಾರವಾಡ ರಂಗಾಯಣ ಆವರಣದಲ್ಲಿಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2744522, 2955522 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.