BIG NEWS : 2028 ರಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು : 2028 ರಲ್ಲಿಯೂ ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಪಕ್ಷ ಒಳಜಗಳದಿಂದಾಗಿ ಒಡೆದ ಮನೆಯಾಗಿದೆ. ಅವರ ಪಕ್ಷದಲ್ಲಿ ನಿತ್ಯ ಒಂದೊಂದು ಹೊಸ ಕಚ್ಚಾಟ ಬೆಳಕಿಗೆ ಬರುತ್ತಿದೆ, ಆದರೆ ನಮ್ಮಲ್ಲಿ ಈ ತರಹದ ಸಮಸ್ಯೆ ಇಲ್ಲ. ನಾವು ಒಗ್ಗಟ್ಟಾಗಿದ್ದೇವೆ. 5 ವರ್ಷಗಳೂ ನಮ್ಮದೇ ಸರ್ಕಾರ ಇರುತ್ತದೆ, 2028ರ ಚುನಾವಣೆಯಲ್ಲಿಯೂ ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದಾರೆ.

ಭಾರತವನ್ನು ಬ್ರಿಟಿಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ರವರು, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮ ದಿನ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದ ಬಗ್ಗೆ ಅಪಾರ ಗೌರವಾಭಿಮಾನ ಹೊಂದಿದ್ದ ಮಹಾನ್ ದೇಶಭಕ್ತ. ಈಗಿನ ಐಎಎಸ್ ನಂತೆ ಬ್ರಿಟೀಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಆದರೆ ತಮ್ಮ ಉಜ್ವಲ ಭವಿಷ್ಯವನ್ನು ತ್ಯಾಗ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಮೀಸಲಾಗಿಟ್ಟರು. ಎರಡು ಬಾರಿ ಕಾಂಗ್ರೆಸ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮಹಾತ್ಮ ಗಾಂಧಿಯವರು ಪ್ರತಿಪಾದಿಸುತ್ತಿದ್ದ ಸತ್ಯ ಹಾಗೂ ಅಹಿಂಸೆಯ ಮಾರ್ಗದಲ್ಲಿ ನಡೆದು ಭಾರತ ಸ್ವಾತಂತ್ರ್ಯ ಹೊಂದುವುದು ಕಷ್ಟಸಾಧ್ಯ ಎಂಬುದು ನೇತಾಜಿಯ ಅಭಿಪ್ರಾಯವಾಗಿತ್ತು. ಆದ್ದರಿಂದ ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟೀಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಐಎನ್ಎ (ಇಂಡಿಯನ್ ನ್ಯಾಷನಲ್ ಆರ್ಮಿ)ಯನ್ನು ಸ್ಥಾಪಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ರ ಜನ್ಮದಿಂದು ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read