ದಾವಣಗೆರೆ: ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆ ಅಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ, ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ-4, ಪರಿಶಿಷ್ಟ ಪಂಗಡದ -3 ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ದ್ವಿ ಪ್ರತಿಯಲ್ಲಿ ಫೆಬ್ರವರಿ 2 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-230123 ಸಂಪರ್ಕಿಸಲು ಸಹಾಯಕ ನಿರ್ದೇಶಕರಾದ ಕಾವ್ಯ ಬಿ. ತಿಳಿಸಿದ್ದಾರೆ.