ಬೀದರ್: ಏಪ್ರಿಲ್ ಅಂತ್ಯಕ್ಕೆ 3000 ಲೈನ್ ಮೆನ್ ಗಳ ನೇಮಕಾತಿ ಪೂರ್ಣಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ.
ಬೀದರ್ ನಲ್ಲಿ ಗುರುವಾರ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ 3000ಕ್ಕೂ ಅಧಿಕ ಲೈನ್ ಮೆನ್ ಗಳ ಕೊರತೆ ಇದೆ. ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಏಪ್ರಿಲ್ ಅಂತ್ಯದೊಳಗೆ ನೇಮಕಾತಿ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಇಂಧನ ಇಲಾಖೆ ಲೈನ್ ಮೆನ್ ಗಳ ಸಮಸ್ಯೆ ಎದುರಿಸುತ್ತಿದ್ದು, ಇದಕ್ಕಾಗಿ ಪರಿಹಾರ ಕಂಡುಕೊಳ್ಳಲು 3000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಮೂರು ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, 15,000 ಮಂದಿ ಅರ್ಹತೆ ಪಡೆದುಕೊಂಡಿದ್ದಾರೆ. ಒಂದೇ ದಿನ ದೈಹಿಕ ಪರೀಕ್ಷೆ ನಡೆಸಲು ಚಿಂತನೆ ಇದೆ ಎಂದು ಹೇಳಿದ್ದಾರೆ.