ಬೆಂಗಳೂರು : ಅರಣ್ಯದಲ್ಲಿ ಸಿನಿಮಾ ಶೂಟಿಂಗ್’ಗೆ ಇನ್ಮುಂದೆ ಸರ್ಕಾರದ ಅನುಮತಿ ಕಡ್ಡಾಯ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಅರಣ್ಯದಲ್ಲಿ ಚಿತ್ರಗಳ ಶೂಟಿಂಗ್’ಗೆ ಮಾಡಲು ಸರ್ಕಾರ/ ಅರಣ್ಯ ಇಲಾಖೆಯ ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಕಾಂತಾರಾ-2 ಸಿನಿಮಾ ಚಿತ್ರೀಕರಣದ ವೇಳೆ ಅರಣ್ಯ ಭೂಮಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕಾಂತಾರಾ-2 ಸಿನಿಮಾ ಶೂಟಿಂಗ್ ವೇಳೆ ಅರಣ್ಯ ಭೂಮಿ ನಿಯಮ ಉಲ್ಲಂಘನೆಯಾಗಿಲ್ಲ. ಚಿತ್ರೀಕರಣಕ್ಕೆ ನಿಯಮಾವಳಿ ಪ್ರಕಾರ ಅನುಮತಿ ನೀಡಲಾಗಿದೆ. ಅರಣ್ಯ ಭೂಮಿಯಲ್ಲಿ ಚಿತ್ರೀಕರಣ ಮಾಡಿಲ್ಲ. ಕಂದಾಯ ಜಮೀನಿನಲ್ಲಿ ಚಿತ್ರೀಕರಣ ಮಾಡಿದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದೆ.ಸಂಪೂರ್ಣ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.