ಬೆಂಗಳೂರು: ಅಧರ್ಮದ ಜಗತ್ತು ತೊರೆದು, ಸತ್ಯದ ಕಡೆಗೆ ಹೋಗುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೋಹಿತ್ ಋಷಿ ನಾಪತ್ತೆಯಾಗಿರುವ ವಿದ್ಯಾರ್ಥಿ. ವಿದ್ಯಾರಣ್ಯಪುರದ ನಿವಾಸಿ ಅರ್ಜುನ್ ಕುಮಾರ್ ಎಂಬುವವರ ಪುತ್ರ. ಮೋಹಿತ್ ಋಷಿ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ. ಜನವರಿ 16ರಂದು ಬೆಳಗಿನ ಜಾವ ಮನೆಯಲ್ಲಿಯೇ ಮೊಬೈಲ್ ಫೋನ್ ಬಿಟ್ಟು ಪುಸ್ತಕದಲ್ಲಿ ಪತ್ರವೊಂದನ್ನಿಟ್ಟು ನಾಪತ್ತೆಯಾಗಿದ್ದಾನೆ.
ಅಧರ್ಮದ ಜಗತ್ತು ತೊರೆದು ಸತ್ಯದ ಕಡೆಗೆ ಹೋಗುತ್ತಿದ್ದೇನೆ. ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಹೊರಡುತ್ತಿದ್ದೇನೆ ಎಂದು ಬರೆದಿದ್ದಾನೆ. ವಿದ್ಯಾರ್ಥಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೋಷಕರು ಕಂಗಾಲಾಗಿದ್ದಾರೆ.
ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕುಂಭಮೇಳ ನಡೆಯುತ್ತಿರುವುದರಿಂದ ವಿದ್ಯಾರ್ಥಿ ಕುಂಭಮೇಳಕ್ಕೆ ಹೋಗಿರುವ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ.