ಬೆಳಗಾವಿ : ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಬ್ಯೂಟಿ ಪಾರ್ಲರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರು ಮಹಿಳೆಯರ ರಕ್ಷಣೆ ಮಾಡಿದ್ದಾರೆ.
ವೇಶ್ಯಾ ವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಬೆಳಗಾವಿಯ ಅನಗೂಳದ ಮುಖ್ಯ ರಸ್ತೆಯಲ್ಲಿ ಇರುವ ಅಂಜಲಿ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮೇಲೆ ದಾಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸ್ ಆಯುಕ್ತ ಹಾಗೂ ಉಪ ಆಯುಕ್ತರ ಮಾರ್ಗದರ್ಶನದಂತೆ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯ ಪಿಐ ಬಿ.ಆರ್. ಗಡೇಕರ್ ಅವರ ನೇತ್ರತ್ವದಲ್ಲಿ ದಾಳಿ ನಡೆದಿದೆ.
ವೇಶಾವಾಟಿಕೆಯಲ್ಲಿ ತೊಡಗಿದ್ದ 6 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಮಹಿಳೆ ಸೇರಿ ಅನಗೂಳದ ನಾಲ್ವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.ಸ್ನಾ ಮತ್ತು ಬ್ಯೂಟಿ ಪಾರ್ಲರ್ ಮಾಲಿಕಿ ಅಂಜಲಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸಿಇಎನ್ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ.