ಬೆಂಗಳೂರು : ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ ಹಿನ್ನೆಲೆ ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ ಹಿನ್ನೆಲೆ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು , ನಂತರ ಪೊಲೀಸರು ಫೈಟರ್ ರವಿಯನ್ನು ಬಂಧಿಸಿದ್ದಾರೆ.
ಅಪರಾಧ ಹಿನ್ನೆಲೆಯುಳ್ಳ ಫೈಟರ್ ರವಿ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅಪರಾಧ ಹಿನ್ನೆಲೆಯುಳ್ಳ ಫೈಟರ್ ರವಿ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದರು. ನಂತರ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಜೆಪಿಗೆ ಗುಡ್ ಬೈ ಹೇಳಿದ್ದರು. ಬಿಜೆಪಿಯಿಂದ ದೂರವಾದ ಬೆನ್ನಲ್ಲೇ ಫೈಟರ್ ರವಿ ನಿವಾಸದ ಮೇಲೆ ಐಟಿ ದಾಳಿ ನಡೆಸಿತ್ತು.