ಬೆಂಗಳೂರು: ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಇಂದು ಸುಪ್ರೀಂ ಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾಯಾಲಯದಲ್ಲಿ ಏನು ತೀರ್ಪು ಬರಲಿದೆ ನೋಡೋಣ. ನಾವು ನಮ್ಮ ಕೆಲಸ ಮಾಡಿದ್ದೇವೆ. ಪೊಲೀಸರು ದಾಖಲಾತಿಗಳನ್ನು ಲಾಯರ್ ಮೂಲಕ ನ್ಯಾಯಾಲಯಕ್ಕೆ ಕೊಟ್ಟಿರುತಾರೆ. ಕೋರ್ಟ್ ನಲ್ಲಿ ಏನು ತೀರ್ಮಾನ ಬರಲಿದೆ ಅದರ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.