ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಕೊಲೆಯಾಗಿದ್ದು, ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರಾಮಮೂರ್ತಿ ನಗರದ ಕಲ್ಕೆರೆ ಅಪಾರ್ಟ್ ಮೆಂಟ್ ನಲ್ಲಿ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ಕಲ್ಕೆರೆ ಕೆರೆ ಬಳಿ ಶವವಾಗಿ ಪತ್ತೆಯಾಗಿದ್ದಾಳೆ.
ಬಾಂಗ್ಲಾ ಮೂಲದ ನಜ್ಮಾ ಎಂಬ ಮಹಿಳೆಯನ್ನು ಕೊಲೆ ಮಾಡಲಾಗಿದ್ದು, ಈಕೆ ಮೂವರು ಮಕ್ಕಳ ತಾಯಿ ಎಂದು ಹೇಳಲಾಗುತ್ತಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.