ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.
ಆರೋಪಿಗಳು ಅಮಾನವೀಯ ನಡೆದುಕೊಂಡಿದ್ದಾರೆ ಎಂದು ಸುಪ್ರೀಂಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ಜಾರಿಮಾಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ & ಗ್ಯಾಂಗ್ ಅರ್ಜಿ ವಿಚಾರಣೆ ಆರಂಭವಾಗಿದೆ. ದರ್ಶನ್ ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಹೈಕೋರ್ಟ್ ನಿಂದ 7 ಮಂದಿ ಕೊಲೆ ಆರೋಪಿಗಳಿಗೆ ಜಾಮೀನು ನೀಡಿದ್ದು, ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.
ಜನವರಿ 6ರಂದು ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಲಾಗಿದ್ದು, ಇಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಾಗುತ್ತದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮಹಾದೇವನ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ.