ಮಹಾರಾಷ್ಟ್ರದ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಇಂದು ಪ್ರಬಲ ಸ್ಫೋಟ ಸಂಭವಿಸಿದ್ದು, . ಆರಂಭಿಕ ವರದಿಗಳ ಪ್ರಕಾರ, ಕನಿಷ್ಠ5 ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಸ್ಫೋಟ ಸಂಭವಿಸಿದೆ. ಆರಂಭಿಕ ವರದಿಗಳ ಪ್ರಕಾರ, ಕಾರ್ಖಾನೆಯ ಆರ್ಕೆ ಶಾಖೆ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ.
ಸ್ಫೋಟದ ಪರಿಣಾಮವಾಗಿ, ಮೇಲ್ಛಾವಣಿ ಕುಸಿದಿದೆ. “ಜವಾಹರ್ ನಗರ ಭಂಡಾರದ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದ ನಂತರ, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಮತ್ತು ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಲ್ಛಾವಣಿ ಕುಸಿದಿದ್ದು, ಅದನ್ನು ಜೆಸಿಬಿ ಸಹಾಯದಿಂದ ತೆಗೆದುಹಾಕಲಾಗುತ್ತಿದೆ” ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಲವಾರು ಆಂಬ್ಯುಲೆನ್ಸ್ ಗಳು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ. ಶಸ್ತ್ರಾಸ್ತ್ರ ಕಾರ್ಖಾನೆ ಸ್ಫೋಟದ ಬಗ್ಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, “ಇದು ಮೋದಿ ಸರ್ಕಾರದ ವೈಫಲ್ಯ ಎಂದಿದ್ದಾರೆ.