ಬೆಂಗಳೂರು : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ ಮಾಡಲಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
‘ಮೈಕ್ರೋ ಫೈನಾನ್ಸ್’ ಕಿರುಕುಳದ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು ಮೈಕ್ರೋ ಫೈನಾನ್ಸ್’ ಕಿರುಕುಳ ಆಗುತ್ತಿದೆ ಎಂದು ರಾಜ್ಯಾದ್ಯಂತ ದೂರು ದಾಖಲಾಗಿದೆ. ಬ್ಯಾಂಕ್ ನಿಯಮಗಳ ಪ್ರಕಾರ ಹಣ ರಿಕವರಿ ಮಾಡಲು ಕಾನೂನು ಇದೆ. ಹಾಗೂ ಅವರನ್ನು ರಕ್ಷಣೆ ಮಾಡಲು ಕಾನೂನು ಇದೆ. ಈಗ ಇರುವ ಕಾನೂನು ಸಾಕಾಗುತ್ತಿಲ್ಲ. ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ ಮಾಡಲಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಮೈಕ್ರೋ ಫೈನಾನ್ಸ್ ನವರ ಕಾಟಕ್ಕೆ ನೊಂದ ಜನರು ಹಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮತ್ತೆ ಹಲವರು ಊರಿಗೇ ಊರೇ ಖಾಲಿ ಮಾಡಿಕೊಂಡು ಹೋಗುತ್ತಿದ್ದಾರೆ. ಫೈನಾನ್ಸ್ ಕಂಪನಿಗಳ ಕಿರುಕುಳ ರಾಜ್ಯದಲ್ಲಿ ಮಿತಿ ಮೀರುತ್ತಿದ್ದು, ಜನರು ಬೀದಿಪಾಲಾಗುತ್ತಿದ್ದಾರೆ.