ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2024-25ನೇ ಸಾಲಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲೆಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಯನ್ನು ಒಳಗೊಂಡಂತೆ ಕಲೆ, ಕ್ರೀಡೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಅಪಾಯದಿಂದ ವ್ಯಕ್ತಿಯ ಜೀವ ಉಳಿಸಿದ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು, ದಿ: 07/02/2025 ರೊಳಗಾಗಿ ಯೂನಿಕೋಡ್ (ನುಡಿ 6.0) ನಲ್ಲಿಯೇ ಭರ್ತಿ ಮಾಡಿ ದ್ವಿಪ್ರತಿಗಳಲ್ಲಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-295515 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.