ಯಾದಗಿರಿ: ಮೀಟರ್ ಬಡ್ಡಿ ಸಾಲ ಮರುಪಾವತಿ ಮಾಡದ ಕಾರಣಕ್ಕೆ ದುಷ್ಕರ್ಮಿಗಳು ಯುವಕನ ಮೇಲೆ ಮಾರನಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಖಾಸಿಂ ಮೃತ ಯುವಕ. ಯಾಸೀನ್ ಯುವಕನನ್ನು ಹತ್ಯೆಗೈದ ಆರೋಪಿ. ಖಾಸಿಂ ಜ.15ರಂದು 35 ಸಾವಿರ ರೂಪಾಯಿ ಮರುಪಾವತಿ ಮಾಡಬೇಕಿತ್ತು. ಆದರೆ ಸಾಲ ಮರುಪಾವತಿ ಮಾಡಲು ವಿಳಂಬವಾಗಿದೆ. ಹಣ ಮರುಪಾವತಿ ಮಡದೇ ಇದ್ದಿದ್ದಕ್ಕೆ ಖಾಂ ನನ್ನು ಹಿಡಿದು, ಯಾಸೀನ್, ಬಾರುಕೋಲಿನಿಂದ ಮನಬಂದಂಎ ಥಳಿಸಿದ್ದ. ಅಲ್ಲದೇ ಮೊಣಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದ.
ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಖಾಸಿಂನನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಕಲಬುರಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಖಾಸಿಂ ಕೊನೆಯುಸಿರೆಳೆದಿದ್ದಾನೆ.
ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.