ಬೆಂಗಳೂರು: 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶೋಭಾರಾಣಿ ಲೋಕಾಯುಕ್ತ ಬೆಲೆಗೆ ಬಿದ್ದ ಪಿಡಿೊ. ಜಮೀನು ಖಾತೆಗೆ ಸಂಬಂಧಿಸಿದಂತೆ ರಮೇಶ್ ಎಂಬುವವರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಬ್ರೋಕರ್ ರುದ್ರಪ್ಪ ಮೂಲಕ ಅವರು ಲಂಚ ಪಡೆಯುತ್ತಿದ್ದರು. ಬೆಂಗಳೂರು ಗ್ರಾಮಾಂತರ ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.