ಬೆಂಗಳೂರು: ಸ್ಯಾಂಡಲ್ವುಡ್ ಸ್ಟಾರ್ ಶಿವರಾಜ್ ಕುಮಾರ್ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಮೆರಿಕದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಶಿವಣ್ಣ ನಾಳೆ ಬೆಂಗಳೂರಿಗೆ ಆಗಮಿಸುವ ಬಗ್ಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಕಳೆದ ತಿಂಗಳು ಅಮೆರಿಕಕ್ಕೆ ತೆರಳಿದ್ದ ಅವರು ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಯಶಸ್ವಿ ಶಸ್ತ್ರಚಿಕಿತ್ಸೆ ನಡೆದಿತ್ತು. ನಂತರ ಚೇತರಿಸಿಕೊಂಡ ಶಿವಣ್ಣ ಬೆಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಗಣರಾಜ್ಯೋತ್ಸವಕ್ಕೆ ಶಿವಣ್ಣ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಕಿರುತೆರೆಯಲ್ಲಿ ‘ಬೈರತಿ ರಣಗಲ್’ ಸಿನಿಮಾ ಪ್ರಸಾರವಾಗಲಿದ್ದು, ಚಿತ್ರ ವೀಕ್ಷಿಸುವಂತೆ ಶಿವಣ್ಣ ಕೋರಿದ್ದಾರೆ.