ಬೆಂಗಳೂರು: ಬೆಂಗಳೂರು ವಕೀಲರ ಸಂಘದ ಆಡಳಿತ ಮಂಡಳಿ ಆಯ್ಕೆ ಚುನಾವಣೆಯಲ್ಲಿ ಮಹಿಳಾ ವಕೀಲ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನದ ಈ ಹಿನ್ನೆಲೆಯಲ್ಲಿ ಫೆಬ್ರವರಿ 2ರಂದು ನಿಗದಿಯಾಗಿದ್ದ ಚುನಾವಣೆಯನ್ನು ರದ್ದುಪಡಿಸಲಾಗಿದೆ.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 2025ರ ಜನವರಿ 8ರಂದು ಪ್ರಕಟಿಸಿದ ಚುನಾವಣಾ ವೇಳಾಪಟ್ಟಿಯನ್ನು ಅಮಾನತುಗೊಳಿಸಲಾಗಿದೆ. ಮರುಚುನಾವಣೆ ಪ್ರಕ್ರಿಯೆಯನ್ನು ನಂತರ ತಿಳಿಸಲಾಗುವುದು ಎಂದು ಬೆಂಗಳೂರು ವಕೀಲರ ಸಂಘದ ಉನ್ನತ ಅಧಿಕಾರ ಸಮಿತಿಯ ಅಧ್ಯಕ್ಷ ಮತ್ತು ಮುಖ್ಯ ಚುನಾವಣಾ ಅಧಿಕಾರಿ ಕೆ.ಎನ್. ಫಣೀಂದ್ರ ಪ್ರಕಟಣೆ ನೀಡಿದ್ದಾರೆ.
ಬೆಂಗಳೂರು ವಕೀಲರ ಸಂಘದ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇಕಡ 33ರಷ್ಟು ಮೀಸಲಾತಿ ನೀಡಲು ಆದೇಶಿಸಬೇಕು ಎಂದು ಕೋರಿ ವಕೀಲರಾದ ಹೆಚ್.ಸಿ. ಕವಿತಾ ಇತರರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ನೀಡಲು ಕೋರ್ಟ್ ಆದೇಶಿಸಿದೆ.