ಬೆಂಗಳೂರು : ದಿನಾಂಕ: 26/01/2025 ರಂದು ಬೆಳಗ್ಗೆ 09-00 ಗಂಟೆಗೆ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ 2025 ರ ಅಂಗವಾಗಿ ವಿಶೇಷ ಕವಾಯತು ನಡೆಯಲಿದ್ದು,ರಾಜ್ಯಪಾಲರು ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಲಿದ್ದಾರೆ.
ಇದರ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತ-ಮುತ್ತಲು ಈ ಕೆಳಕಂಡಂತೆ ಸಂಚಾರ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.
1. ಕಾರ್ ಪಾಸ್ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್ ಗಳಲ್ಲಿ ನಿಗಧಿಪಡಿಸಿದ ಗೇಟ್ಗಳಲ್ಲಿ ಇಳಿದುಕೊಳ್ಳುವುದು ಹಾಗೂ ಪಾಸ್ನಲ್ಲಿ ನಿಗಧಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆಮಾಡುವಂತೆ ಕೋರಲಾಗಿದೆ.
2. ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು, ನೀರಿನಟ್ಯಾಂಕರ್, ಕೆ.ಎಸ್.ಆರ್.ಪಿ.. ಕ್ಯೂ.ಆರ್.ಟಿ. ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂ.ಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
3. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ-4 ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗದಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.
4. ದಿನಾಂಕ:26/01/2025 ರಂದು ಬೆಳಗ್ಗೆ 08-30 ಗಂಟೆಯಿಂದ ಬೆಳಗ್ಗೆ 10-30 ರ ವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್ ನಿಂದ ಕಾಮರಾಜರಸ್ತೆ ಜಂಕ್ಷನ್ ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಿ ಈ ಕೆಳಕಂಡಂತೆ ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ.
> ಇನ್ಫೆಂಟ್ರಿರಸ್ತೆಯಲ್ಲಿ ಮಣಿಪಾಲ್ ಸೆಂಟರ್ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್ ಫೆಂಟ್ರಿರಸ್ತೆ – ಸಫೀನಾ ಪ್ಲಾಜಾ ಎಡತಿರುವು ಪಡೆದು ಮೈನ್ಗಾರ್ಡ್ ರಸ್ತೆ- ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) January 24, 2025