ಬೆಂಗಳೂರು: ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಗೆ ಸೆಳೆಯುವ ಯತ್ನ ನಡೆಯುತ್ತಿದೆ. ಸತೀಶ್ ಜಾರಕಿಹೊಳಿಯವರನ್ನು ಮಣಿಸಲು ಶ್ರೀರಾಮುಲು ಅವರನ್ನು ಡಿ.ಕೆ.ಶಿವಕುಮಾರ್ ಸಂಪರ್ಕಿಸಿದ್ದಾರೆ ಎಂದು ಶಾಸಕ ಜನಾರ್ಧನ ರೆಡ್ಡಿ ಹೇಳಿಕೆ ನೀಡಿದ್ದರು. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಜನಾರ್ಧನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಾನು ಶ್ರೀರಾಮುಲು ಅವರನ್ನು ಭೇಟಿಯಾಗಿಲ್ಲ. ಅವರಿಗೆ ಈಗ ಯಾವುದೇ ಆಹ್ವಾನ ನೀಡಿಲ್ಲ ಎಂದಿದ್ದಾರೆ.
ವಿಧಾನಸಭೆ ಚುನಾವಣೆಗೂ ಮುನ್ನ ನಾನು ಶ್ರೀರಾಮುಲು ಅವರಿಗೆ ಪಕ್ಷಕ್ಕೆ ಬರಲು ಕೇಳಿದ್ದೆ. ಆದ ಅವರು ನಾನು ಬಿಜೆಪಿಯಲ್ಲಿಯೇ ಇರುತ್ತೇನೆ ಎಂದಿದ್ದರು. ಆಗ ಶ್ರೀರಾಮುಮು ಮಾತ್ರವಲ್ಲ 50 ಶಾಸಕರನ್ನು ಕೂಡ ಸಂಪರ್ಕ ಮಾಡಿದ್ದೆ ಎಂದು ಹೇಳಿದರು.