ಅಮೆರಿಕದಲ್ಲಿ ಭಾರತಕ್ಕೆ ರಾಜತಾಂತ್ರಿಕ ಗೆಲುವು ಸಿಕ್ಕಿದ್ದು, ಆರೋಪಿ ತಹಾವುರ್ ರಾಣಾ ಹಸ್ತಾಂತರಕ್ಕೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.
2008 ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಶಿಕ್ಷೆಗೊಳಗಾದ ತಹವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಯುಎಸ್ ಸುಪ್ರೀಂ ಕೋರ್ಟ್ ಅನುಮೋದನೆ ನೀಡಿದೆ.ಪಾಕಿಸ್ತಾನ ಮೂಲದ ಕೆನಡಾ ಪ್ರಜೆಯಾಗಿರುವ ರಾಣಾ, ಮುಂಬೈನ ಅನೇಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇಲೆ ಭಾರತೀಯ ಅಧಿಕಾರಿಗಳು ಆತನನ್ನು ಹುಡುಕುತ್ತಿದ್ದಾರೆ.
ತನ್ನ ಹಸ್ತಾಂತರವನ್ನು ಯುಎಸ್ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ ವಾರಗಳ ನಂತರ, ತಹವೂರ್ ರಾಣಾ ಅವರ ಮನವಿಯನ್ನು ವಜಾಗೊಳಿಸಲಾಗಿದೆ, ಇದು ಅವರನ್ನು ಭಾರತಕ್ಕೆ ಹಸ್ತಾಂತರಿಸಲು ದಾರಿ ಮಾಡಿಕೊಟ್ಟಿದೆ.