ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತ ಹಾಗೂ ಅಧಿಕರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಕ್ಯಾಥೆಡ್ರೆಲ್ ಸೊಸೈಟಿಗೆ ಅಕ್ರಮವಾಗಿ ಭೂಮಿ ಹಂಚಿಕೆ ಮಾಡಲಾಗಿರುವ ಆರೋಪ ಹಿನ್ನೆಲೆಯಲ್ಲಿ ಮಾಜಿ ಆಯುಕ್ತರು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ.
75225 ಚದರ ಅಡಿಯ ಜಾಗವನ್ನು ಕ್ಯಾಥಡ್ರೆಲ್ ಸೊಸೈಟಿಗೆ ಅಕ್ರಮವಾಗಿ ನೀಡಿದ ಆರೋಪ ಕೇಳಿಬಂದಿದ್ದು, ಹಿಂದಿನ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಈ ಪ್ರಕರಣ ಸಂಬಂಧ ಇದೀಗ ಕ್ರಮ ಕೈಗೊಂಡಿರುವ ಸರ್ಕಾರ, ಮೂರು ದಿನಗಳಲ್ಲಿ ದೋಷಾರೋಪಪಟ್ಟಿ ಸಲ್ಲಿಸುವಂತೆ ಸೂಚನೆ ನೀಡಿದೆ.