ಬಳ್ಳಾರಿ : ಬಳ್ಳಾರಿ ಜಿಲ್ಲಾಸ್ಪತ್ರೆಯ ಖ್ಯಾತ ಮಕ್ಕಳ ವೈದ್ಯ ಡಾ. ಸುನೀಲ್ ಅವರನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಇಂದು ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದೆ.
ಸೂರ್ಯನಾರಾಯಣಪೇಟೆ ಶನೇಶ್ವರ ಗುಡಿಯಿಂದ ಅವರನ್ನು ಕಿಡ್ನ್ಯಾಪ್ ಮಾಡಲಾಗಿದ್ದು, 6 ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಡಾ. ಸುನೀಲ್ ಮೊಬೈಲ್ ನಿಂದ ಅವರ ಕುಟುಂಬಕ್ಕೆ ಕರೆ ಮಾಡಿದ ದುಷ್ಕರ್ಮಿಗಳು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಘಟನೆ ಸಂಬಂಧ ಬಳ್ಳಾರಿ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.