ಚಾಮರಾಜನಗರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಕಿಟಕಿಯಿಂದ ತಲೆ ಹೊರಗೆ ಹಾಕಿದ್ದು, ಈ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿ ಮಹಿಳೆಯ ತಲೆಯೇ ಕಟ್ ಆಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆ ಹೊರಟಿದ್ದ ಕೆಎಆಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ಯಾವುದೋ ಕಾರಣಕ್ಕೆ ಬಸ್ ನ ಕಿಟಕಿಯಿಂದ ತಲೆ ಹೊರಗಡೆ ಹಾಕಿದ್ದಾರೆ. ಈ ವೇಳೆ ಮುಂಭಾಗದಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆಯ ತಲೆ ಕಟ್ ಆಗಿದ್ದು, ದೇಹದಿಂದ ಬೇರ್ಪಟ್ಟಿದೆ.
ಅಪಘಾತದ ಭೀಕರತೆಗೆ ಸಹ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.