ಮಂಡ್ಯ: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮೀಟರ್ ಬಡ್ಡಿ ದಂಧೆಕೋರರ ಕಾಟಕ್ಕೆ ನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಎಯ ವಳಗೆರೆ ಮಣಸ ಗ್ರಾಮದಲ್ಲಿ ನಡೆದಿದೆ.
ಲೋಹಿತ್ (35) ಮೃತ ದುರ್ದೈವಿ. ಮೀಟರ್ ಬಡ್ಡಿಗೆ ಸಾಲ ಪಡೆದುಕೊಂಡಿದ್ದ ಯುವಕ, 30 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಮೂರು ದಿನಗಳ ಹಿಂದಷ್ಟೇ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದ. ಬಳಿಕ ಗ್ರಾಮಸ್ಥರ ಸಮ್ಮುಖದಲ್ಲಿ ಸಮಸ್ಯೆ ಬಗೆಹರಿಸಿಕೊಂಡು ವಾಪಾಸ್ ಆಗಿದ್ದ.
ಇದೀಗ ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ನೊಂದು ಬೇರೆ ದಾರಿ ಕಾಣದೇ ನೇಣಿಗೆ ಕೊರಳೊಡ್ಡಿದ್ದಾನೆ. ಕೆ.ಆರ್.ಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.