HomeKarnatakaBIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಬೆಂಗಳೂರು: 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಗ್ರಾಮದಲ್ಲಿ ನಡೆದಿದೆ.

ಟಿ.ಬೇಗೂರು ಗ್ರಾಮ ಪಂಚಾಯಿತಿ ಪಿಡಿಒ ಶೋಭಾರಾಣಿ ಲೋಕಾಯುಕ್ತ ಬಲೆಗೆ ಬಿದ್ದವರು. ತೊರೆಕೆಂಪೋಹಳ್ಳಿ ಗ್ರಾಮದ ರಮೇಶ್, ಟಿ.ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದ ತಮ್ಮ ನಿವೇಶನವನ್ನು ತಮ್ಮ ಪತ್ನಿ ಹೆಸರಿಗೆ ಖಾತಾ ಬದಲಾಯಿಸುವಂತೆ ಅರ್ಜಿ ಸಲ್ಲಿಸಿದ್ದರು. ಖಾತೆ ಮಾಡಿಕೊಡುವ ವಿಚಾರಕ್ಕೆ ಮಧ್ಯವರ್ತಿ ರುದ್ರಪ್ಪ ಮೂಲಕ ಪಿಡಿಒ ಶೋಭಾರಾಣಿ 20 ಸಾವಿರಕ್ಕೆ ಬೇದಿಕೆ ಇಟ್ಟಿದ್ದರು. ಲಂಚದ ಹಣ ನೀಡಲು ರುದ್ರಪ್ಪ ರಮೇಶ್ ಅವರನ್ನು ಗ್ರಾಮ ಪಂಚಾಯಿತಿ ಕಚೇರಿಗೆ ಕರೆತಂದಿದ್ದರು.

ಈ ವೇಳೆ ರಮೇಶ್ ಅವರಿಂದ ಪಿಡಿಒ ಶೋಭಾರಾಣಿ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಡಿಒ ಶೋಭಾರಾಣಿಯನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular