HomeIndiaBREAKING: ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ: ಆರ್. ಅಶ್ವಿನ್ ಗೆ ಪದ್ಮಶ್ರೀ: ಕರ್ನಾಟಕದ...

BREAKING: ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ: ಆರ್. ಅಶ್ವಿನ್ ಗೆ ಪದ್ಮಶ್ರೀ: ಕರ್ನಾಟಕದ 9 ಮಂದಿಗೆ ಪದ್ಮ ಪ್ರಶಸ್ತಿ ಘೋಷಣೆ

ನವದೆಹಲಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಒಟ್ಟು 9 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಿಸಲಾಗಿದೆ.

ಒಂದು ಪದ್ಮವಿಭೂಷಣ, ಎರಡು ಪದ್ಮಭೂಷಣ ಮತ್ತು ಆರು ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ. ಹಿರಿಯ ನಟ ಅನಂತನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. ಕಲಾವಿಭಾಗದಲ್ಲಿನ ಸಾಧನೆಗಾಗಿ ಅನಂತನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ. ಅರಕಲಗೂಡು ಸೂರ್ಯಪ್ರಕಾಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ. ಪ್ರಸಾರ ಭಾರತೀಯ ಮಾಜಿ ಅಧ್ಯಕ್ಷರಾಗಿರುವ ಅರಕಲಗೂಡು ಸೂರ್ಯಪ್ರಕಾಶ್ ಸಾಹಿತ್ಯ, ಶಿಕ್ಷಣ, ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿ ಪ್ರಶಸ್ತಿ ನೀಡಲಾಗಿದೆ.

ಲಕ್ಷ್ಮಿ ನಾರಾಯಣ ಸುಬ್ರಮಣ್ಯಂ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ಕಲಾ ವಿಭಾಗದಲ್ಲಿನ ಸಾಧನೆಗಾಗಿ ಲಕ್ಷ್ಮೀನಾರಾಯಣ ಸುಬ್ರಹ್ಮಣ್ಯಂಗೆ ಪ್ರಶಸ್ತಿ ನೀಡಲಾಗಿದೆ. ಚಲನಚಿತ್ರ ನಿರ್ಮಾಪಕ ರಘು ಹಾಸನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಪ್ರಶಾಂತ್ ಪ್ರಕಾಶ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ. ಅದೇ ರೀತಿ ಸಂಗೀತ ನಿರ್ದೇಶಕ ರಿಕಿ ಕೇಜ್ ಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡು ನಟ ಅಜಿತ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಚಲನಚಿತ್ರ ನಿರ್ಮಾಪಕ ಶೇಖರ್ ಕಪೂರ್ ಗೆ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರಿಗೆ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular