ಬೆಂಗಳೂರು: ದೇಶಾದ್ಯಂತ ಇಂದು ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನಲ್ಲಿ ಇಂದು 76ನೇ ಗಣರಾಜ್ಯೋತ್ಸವ ಅಂಗವಾಗಿ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಭದ್ರತೆ ವಹಿಸಿದ್ದು, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರನೆ ತಂಡಗಳು, ಡಿಸಿಪಿ, ಎಸಿಪಿ ಸೇರಿದಂತೆ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, 103 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.